1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. 2 [a]ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. 3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. 4 ಯೇಸು ಇದನ್ನು ಕೇಳಿ,
17 ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು. 18 ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು [c]ಹರಿದಾರಿಯಷ್ಟು ಅಂತರವಿತ್ತು. 19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. 20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು. 21 ಆಗ ಮಾರ್ಥಳು ಯೇಸುವಿಗೆ, [d]“ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ. 22 ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು. 23 ಯೇಸು ಆಕೆಗೆ,
28 ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು. 29 ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು. 30 ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು. 31 ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು. 32 ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು. 33 ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು, 34
38 ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು. 39 ಯೇಸು,
45 ಆದುದರಿಂದ [g]ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. 46 ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು. 47 ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ. 48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು. 49 ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ [h]ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ. 50 ಇಡೀ [i]ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು. 51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ 52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು 53 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು. 54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು. 56 ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು. 57 ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
<- ಯೋಹಾನನು 10ಯೋಹಾನನು 12 ->-
a 11:2 ಯೋಹಾ 12:3; ಮತ್ತಾ 26:7; ಮಾರ್ಕ 14:3:
b 11:8 ಯೋಹಾ 8:59; 10:31:
c 11:18 ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು. ಹದಿನೈದು ಸ್ತಾದ್ಯಗಳು. ಎರಡು ಮೈಲಿಗಳು.
d 11:21 ಯೋಹಾ 11:32:
e 11:27 ಯೋಹಾ 6:69; ಮತ್ತಾ 16:16; ಮಾರ್ಕ 8:29; ಲೂಕ 9:20:
f 11:40 ಯೋಹಾ 11:4, 23, 26:
g 11:45 ಯೋಹಾ 11:19, 31.
h 11:49 ಮತ್ತಾ 26:3,57.
i 11:50 ಯೋಹಾ 18:14.