1 [a]ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು. 2 ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. 3 ಆಗ ಮರಿಯಳು ಬಹು ಬೆಲೆಯುಳ್ಳ [b]ಸ್ವಚ್ಛ ಜಟಮಾಂಸಿ ತೈಲವನ್ನು [c]ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು. 4 ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು, 5 “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು. 6 ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು. 7 ಆಗ ಯೇಸುವು,
9 ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು. 10 ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು. 11 ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ 13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, § 12:13 ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ.
ಕೀರ್ತ 118:25, 26:“ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು. 14 ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. 15 ಹೀಗೆ, [e]“ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. 16 ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು. 17 ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು. 18 ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು. 19 ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. 21 ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು. 22 ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. 23 ಆಗ ಯೇಸು ಅವರಿಗೆ, [f]
37 ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. 38 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, [m]“ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ [n]ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. 39 ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, 40 [o]“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ. 41 [p]ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. 42 ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. 43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44 ಯೇಸು ಕೂಗಿ ಹೇಳಿದ ಮಾತೇನಂದರೆ,
-
a 12:1 ಮತ್ತಾ 26:6-12; ಮಾರ್ಕ 14:3-8:
b 12:3 ಸುಗಂಧದ್ರವ್ಯ, ನಾರ್ಡೊಸ್ಟಾಕಿಸ್ ಎಂಬ ಮೂಲಿಕೆಯಿಂದ ತಯಾರಿಸಲಾಗಿದೆ.
c 12:3 ಸುಮಾರು ಅರ್ಧ ಲೀಟರಿನಷ್ಟು.
d 12:13 ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ. ಕೀರ್ತ 118:25, 26:
e 12:15 ಜೆಕ. 9:9:
f 12:23 ಯೋಹಾ 12:27; 17:1:
g 12:25 ಮತ್ತಾ 10:39; 16:25; ಮಾರ್ಕ 8:35; ಲೂಕ 9:24; 17:33:
h 12:31 ಯೋಹಾ 16:11:
i 12:31 ಲೂಕ 10:18; ಎಫೆ 2:2:
j 12:32 ಯೋಹಾ 3:14; 8:28:
k 12:34 ಕೀರ್ತ 89:36, 37; 110:4:
l 12:35 ಯೋಹಾ 12:46; ಎಫೆ 5:8; ಯೆರೆ 13:16:
m 12:38 ಯೆಶಾ 53:1:
n 12:38 ಅಥವಾ, ತೋಳು.
o 12:40 ಯೆಶಾ 6:9, 10:
p 12:41 ಯೆಶಾ 6:1: