4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, 5 ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, 6 ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. 7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು. 9 ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. 10 ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು. 11 ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು. 12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
13 ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.
<- 1 ಕೊರಿಂಥದವರಿಗೆ 121 ಕೊರಿಂಥದವರಿಗೆ 14 ->