ಎಜ್ರ
1 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:
5 ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು. 6 ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.
7 ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು. 8 ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.