1 “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
2 ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ. 3 ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು. 4 ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.
5 “ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
6 “ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ. 7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
8 “ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ.
13 “ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ.
14 “ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ, 15 ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”
16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.
17 “ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. 18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.
<- ಮಲಾಕಿ 2ಮಲಾಕಿ 4 ->